ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Share with

ಮುಂಡಾಜೆ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಚಾಂಪಿಯನ್.

ಬೆಳ್ತಂಗಡಿ: ಛತ್ತಿಸ್ ಘಡ್ ನ ಚಂಪಾ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕಿಯರ ತಂಡ ಚಾಂಪಿಯನ್ ಆಗಿ ಮೂಡಿಬಂದಿದೆ.

ನವಂಬರ್ ತಿಂಗಳಿನಲ್ಲಿ ಶಿವಮೊಗ್ಗದಲ್ಲಿ ನಡೆಯುವ ಎಸ್ ಜಿ ಎಫ್ ಐ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ತಂಡದ ತರಬೇತುದಾರರಾಗಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ.ಎಸ್ ಹಾಗೂ ಸಂದೀಪ್ ಶೆಟ್ಟಿ ಕಾರ್ಯ ನಿರ್ವಹಿಸಿರುತ್ತಾರೆ.


Share with

Leave a Reply

Your email address will not be published. Required fields are marked *