ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟ: ದ.ಕ ಮತ್ತು ಉಡುಪಿ ಸೇರಿ 14 ಕ್ಷೇತ್ರಗಳಲ್ಲಿ ಏ.26ರಂದು ಮತದಾನ

Share with

ನವದೆಹಲಿ: ಲೋಕಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಲೋಕಸಭಾ ಚುನಾವಣೆಯ ಮತದಾನ ಏಪ್ರಿಲ್ 19ರಿಂದ ಪ್ರಾರಂಭವಾಗಲಿದ್ದು, ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟ

ಏಪ್ರಿಲ್ 19ರಂದು ಮೊದಲ ಹಂತ, ಏಪ್ರಿಲ್ 26ರಂದು ಎರಡನೇ ಹಂತ, ಮೇ 7ರಂದು ಮೂರನೇ ಹಂತ, ಮೇ 13ರಂದು ನಾಲ್ಕನೇ ಹಂತ, ಮೇ 20ರಂದು ಐದನೇ ಹಂತ, ಮೇ 25 ರಂದು ಆರನೇ ಹಂತ ಮತ್ತು ಜೂನ್ 1ರಂದು ಏಳನೇ ಹಂತದ ಮತದಾನ ನಡೆಯಲಿದೆ.

ಈ ನಡುವೆ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಮತದಾನವು ಏಪ್ರಿಲ್ 26(ಶುಕ್ರವಾರ) ನಡೆಯಲಿದ್ದು, ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಜೂನ್‌ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಲ್ಲಿ ಹಾಗೂ ಮೇ 7ರಂದು ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ ಮೊದಲ ಹಂತ(ಏಪ್ರಿಲ್ 26-ಶುಕ್ರವಾರ)ರಂದು ಮತದಾನ ನಡೆಯಲಿರುವ ಲೋಕಸಭಾ ಕ್ಷೇತ್ರಗಳ ವಿವರ ಹೀಗಿದೆ

ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಮೈಸೂರು-ಕೊಡಗು, ಹಾಸನ, ತುಮಕೂರು, ಚಾಮರಾಜನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಮಂಡ್ಯ.

ಮೇ 7ರಂದು ನಡೆಯಲಿರುವ ಕ್ಷೇತ್ರಗಳ ವಿವರ
ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಧಾರವಾಡ, ಹಾವೇರಿ-ಗದಗ, ವಿಜಯಪುರ, ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು, ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಈಗಾಗಲೇ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ್ದು, ರಾಜ್ಯದಲ್ಲಿ 5.37 ಕೋಟಿ ಮತದಾರರು ಇರುವುದಾಗಿ ತಿಳಿಸಿದೆ.


Share with

Leave a Reply

Your email address will not be published. Required fields are marked *