ಇರಾನ್, ಇಸ್ರೇಲ್ ಹಾಗೂ ಅಮೆರಿಕ ನಡುವಿನ ಯುದ್ಧದ ಪರಿಣಾಮವು ಕೃಷಿ ಕ್ಷೇತ್ರದ ಮೇಲೆ ತೀವ್ರವಾಗಿ ಬೀರಿದೆ.

ಈಗಾಗಲೇ LPG ಸಿಲಿಂಡರ್ ಕೊರತೆ, ಬೆಲೆ ಏರಿಕೆ & ಆಮದು-ರಫ್ತು ವ್ಯವಹಾರದಲ್ಲಿ ಕುಂಠಿತ ಉಂಟಾಗಿದ್ದು, ಅದರ ನೇರ ಪರಿಣಾಮ ಕೃಷಿ ಕ್ಷೇತ್ರಕ್ಕೂ ತಲುಪಿದೆ. ಅನೇಕ ಕೃಷಿ ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂದಿನ ಮುಂಗಾರು ಬಿತ್ತನೆಗೆ ಅಗತ್ಯವಿರುವ ರಸಗೊಬ್ಬರ ದೊರೆಯುತ್ತದೆಯೇ ಎಂಬ ಅನುಮಾನ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ ಎಂದು ವರದಿಯಾಗಿದೆ.




