ಗೋಬಿ ಮಂಚೂರಿ ಖಾದ್ಯದ ಬಗ್ಗೆ ಪರೀಕ್ಷೆ ನಡೆಸುವಂತೆ ಹೇಳಲಾಗಿತ್ತು. ಅದರಂತೆ ಪರೀಕ್ಷೆ ನಡೆಸಲಾಗಿದ್ದು, ವರದಿಯನ್ನು ಪರಿಶೀಲನೆ ನಡೆಸಿ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದನ್ನು ಸೋಮವಾರ ತಿಳಿಸುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.
ಪತ್ರಕರ್ತರ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲೂ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ನಿಷೇಧ ಆಗಲಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಗೋಬಿ ಮಂಚೂರಿ, ಬಾಂಬೆ ಮಿಠಾಯಿ ನಿಷೇಧ ಎಂಬ ಬಗ್ಗೆ ಮಾಧ್ಯಮಗಳಲ್ಲಿ ಮಾಹಿತಿ ಬರುತ್ತಿರುವ ಬಗ್ಗೆ ಸ್ಪಷ್ಟವಾಗಿ ಮಾಹಿತಿ ಇಲ್ಲ. ವರದಿ ನೋಡಿಕೊಂಡು ಏನು ಮಾಡಬೇಕು, ಆ ಬಗ್ಗೆ ಸೋಮವಾರ ತಿಳಿಸುತ್ತೇವೆ ಎಂದು ತಿಳಿಸಿದರು.
ಇನ್ನು ಕುಕ್ಕೆ ಸುಬ್ರಮಣ್ಯದಲ್ಲಿ ಸುಸಜ್ಜಿತ ಆಸ್ಪತ್ರೆ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆರೋಗ್ಯ ಆಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.