ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್‌, ಕೃಷಿ ಕ್ಷೇತ್ರಕ್ಕೆ ಮೋದಿ ನೀಡಿದ ಅನುದಾನ ಎಷ್ಟು?

Share with

ಕೇಂದ್ರ ವಿತ್ತ ಸಚಿವೆ ನಿರ್ಮಾಲ ಸೀತಾರಾಮನ್ ಅವರು ಇಂದು 2024-25 ಸಾಲಿನ ಕೇಂದ್ರ ಬಜೆಟ್​​​ ಮಂಡನೆ ಮಾಡುತ್ತಿದ್ದಾರೆ. ಅನೇಕ ಕ್ಷೇತ್ರಗಳಿಗೆ ಈಗಾಗಲೇ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಕ್ಷೇತ್ರ ವಲಯಕ್ಕೆ ಅನುಗುಣವಾಗಿ ಬಜೆಟ್​​​ ಮಂಡನೆ ಮಾಡಿದ್ದಾರೆ. ಶಿಕ್ಷಣ, ಉದ್ಯೋಗ, ಕೈಗಾರಿಕೆ, ಮಹಿಳೆ, ಕೃಷಿ, ಹೀಗೆ ಅನೇಕ ಕ್ಷೇತ್ರಗಳಿಗೆ ಅನುದಾನ ನೀಡಿದ್ದಾರೆ. ಇದರಲ್ಲೂ ವಿಶೇಷವಾಗಿ ಕೃಷಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ರೈತರ ಮುಖದಲ್ಲಿ ಮಂದಾಸ ಮೂಡಿಸಿದ್ದಾರೆ. ಕೃಷಿ ಕ್ಷೇತ್ರಕ್ಕೆ ಒಟ್ಟು 1.52 ಲಕ್ಷ ಕೋಟಿ ರೂಪಾಯಿ ಮೀಸಲು ಇಡಲಾಗಿದೆ.

5 ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್‌ ನೀಡಲು ನಿರ್ಧಾರವನ್ನು ಈ ಬಜೆಟ್​​ನಲ್ಲಿ ಮಾಡಿದ್ದಾರೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ. ಇನ್ನು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬೇಕಾದ ಎಲ್ಲ ರೀತಿ ಸಹಾಯವನ್ನು ಕೇಂದ್ರ ಮಾಡಲಿದೆ.

ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು ಎಂದು ಹೇಳಿದ್ದಾರೆ. ಹಾಗೂ ಸಾವಯುವ ಕೃಷಿಗೆ ಆದ್ಯತೆ ನೀಡಲಾಗುವುದು ಎಂದು ಬಜೆಟ್​​ನಲ್ಲಿ ಉಲ್ಲೇಖಿಸಿದ್ದಾರೆ. ಎಣ್ಣೆ ಕಾಳುಗಳ ಉತ್ಪಾದನೆ, ಶೇಖರಣೆ, ಮಾರುಕಟ್ಟೆಗಳಿಗೂ ಒತ್ತು ನೀಡಲಾಗುವುದು ಎಂದು ಹೇಳಿದ್ದಾರೆ.

ತರಕಾರಿ ಪೂರೈಕೆಗಾಗಿ ಸಪ್ಲೈ ಚೈನ್ ಬಲಗೊಳಿಸಲಾಗುತ್ತಿದೆ. ಹಾಗೂ ರೈತರ ಅನುಕೂಲಕ್ಕಾಗಿ ಡಿಜಿಟಲ್ ಬೆಳೆ ಸಮೀಕ್ಷೆ ಮಾಡಲಾಗುವುದು ಎಂದು ಹೇಳಿದ್ದಾರೆ. ಕೃಷಿ ಉತ್ಪಾದನೆಯಲ್ಲಿ ಹೆಚ್ಚನ ನಮ್ಮ ಗುರಿಯಾಗಿರುವ ಕಾರಣ ನಮ್ಮ ಸರ್ಕಾರ ಈ ಬಾರಿ ರೈತರಿಗೆ ಹೆಚ್ಚು ಆದ್ಯತೆ ನೀಡಿದೆ ಎಂದು ಹೇಳಿದ್ದಾರೆ.


Share with

Leave a Reply

Your email address will not be published. Required fields are marked *