
ಸಕಲೇಶಪುರ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸಕಲೇಶಪುರದ ಕೌಡಹಳ್ಳಿ ರಸ್ತೆ ಸಂಪೂರ್ಣ ಗುಂಡಿಮಯವಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿ ಮಾಡದಿದ್ದರೆ ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ವರ್ಷದಿಂದ ವರ್ಷಕ್ಕೆ ಬೇಡಿಕೆಯನ್ನ ಇಡುತ್ತಲೆ ಇದ್ದೇವೆ ಆದರೆ ಈ ಕಡೆ ಅಧಿಕಾರಿಗಳು, ಶಾಸಕರು, ಸಂಸದರು ತಿರುಗಿ ನೋಡಲೇ ಇಲ್ಲ ಸಮಸ್ಯೆ ಪರಿಹಾರ ಮಾಡಲೇ ಇಲ್ಲ ಎಂದು ತಿಳಿಸಿದ್ದಾರೆ.




