ಉಡುಪಿ: ಪತಿಯ ಮೈಮೇಲೆ ಪತ್ನಿ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಹಮ್ಮದ್ ಆಸಿಫ್ ಗಾಯಗೊಂಡವರಾಗಿದ್ದು ಇವರ ಪತ್ನಿ ಮಣಿಪುರ ಗ್ರಾಮದ ಗುಜ್ಜಿ ನಿವಾಸಿ ಹುಸೈನ್ ಎಂಬವರ ಪುತ್ರಿ ಅಫ್ರೀನ್ ಕೃತ್ಯ ಎಸಗಿರುವ ಆರೋಪಿಯಾಗಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಆಸಿಫ್ ಅವರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಆಸಿಫ್ ಬೇರೆ ಹುಡುಗಿಯೊಂದಿಗೆ ಸಂಬಂಧ ಹೊಂದಿರುವುದಾಗಿ ಅನುಮಾನ ಹೊಂದಿದ್ದ ಅಫ್ರೀನ್ ಅವರು ಈ ಬಗ್ಗೆ ಆಗಾಗ್ಗೆ ಜಗಳವಾಡುತ್ತಿದ್ದಳೆನ್ನಲಾಗಿದೆ. ಸೆ.12ರಂದು ಸಂಜೆ ಆಸಿಫ್ ಬಾತ್ ರೂಮಿನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಅಫ್ರೀನ್ ಹೊರಗಿನಿಂದ ಬಾಗಿಲು ಬಡಿದಿದ್ದು, ಆಸಿಫ್ ಅವರು ಬಾಗಿಲು ತೆರೆದಾಗ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ಮೈ ಮೇಲೆ ಎರಚಿದ್ದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.