ಬೆಂಗಳೂರು: ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಅಧಿಕಾರವಧಿ ಮುಗಿದಿದ್ದು, ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಮುಂದುವರೆಸಲಾಗಿತ್ತು. ಇದೀಗ ಚುನಾವಣೆ ಮುಗಿದಿದ್ದು, ಅಧ್ಯಕ್ಷ ಸ್ಥಾನ ಬದಲಾವಣೆಯಾಗಬೇಕು ಎಂಬ ಮಾತು ಬಿಜೆಪಿ ಪಾಳಯದಲ್ಲೇ ಕೇಳಿಬರುತ್ತಿದೆ. ಹೀಗಾಗಿ ಸಿ.ಟಿ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಿಂದ ಕೈಬಿಟ್ಟು, ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಕೂರಿಸಲು ಬಿಜೆಪಿ ಕೇಂದ್ರ ನಾಯಕರು ಪ್ಲಾನ್ ರೂಪಿಸಿದ್ದಾರಾ ಎಂಬ ಪ್ರಶ್ನೆ ಉದ್ಭವವಾಗಿದೆ.