
ಚಿಕ್ಕಮಗಳೂರು: ಪಕ್ಷದ ಆಂತರಿಕ ಬಿಕ್ಕಟ್ಟನ್ನು ಬಗೆಹರಿಸಿಕೊಂಡು ಮೇಲೇಳುತ್ತೇವೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ವಿಪಕ್ಷದ ಆಂತರಿಕ ಬಿಕ್ಕಟ್ಟಿನಿಂದ ಜನರಿಗೆ ಯಾವುದೇ ನಷ್ಟವಿಲ್ಲ. ಆದರೆ ಆಡಳಿತ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯ ತಲೆದೋರಿದರೆ ಅಭಿವೃದ್ಧಿಗೆ ತೊಂದರೆಯಾಗುತ್ತಿದ್ದು, ಸಾರ್ವಜನಿಕರಿಗೆ ನಷ್ಟವಾಗಲಿದೆ. ಆಡಳಿತ ಪಕ್ಷದ ಲೋಪದೋಷಗಳನ್ನು ಎತ್ತಿಹಿಡಿಯುವ ಕೆಲಸ ವಿಪಕ್ಷಗಳು ಮಾಡಬೇಕಾಗಿದೆ. ಈಗಾಗಲೇ ಆ ಕೆಲಸವನ್ನು ರಾಜ್ಯದ ಬಿಜೆಪಿ ಮುಖಂಡರು ಮಾಡಿದ್ದಾರೆ. ಮುಂದೆಯೂ ಮಾಡಲಿದ್ದಾರೆ ಎಂದು ಹೇಳಿದರು.




