BJP ರಾಜ್ಯಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಕಚ್ಚಾಟವಿಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಸದ್ಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಇಲ್ಲ, ಹಾಲಿ ಅಧ್ಯಕ್ಷರ ಅವಧಿ ಮುಗಿದ ಬಳಿಕ ನಿರ್ಧರಿಸಲಾಗುತ್ತದೆ.

ಆದರೆ, ಪಕ್ಷದಲ್ಲಿ ದಲಿತರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎನ್ನುವ ವಾತಾವರಣ ಇದೆ ಎಂದಿದ್ದಾರೆ. ಶ್ರೀರಾಮುಲು ಈ ಮೂಲಕ BJP ರಾಜ್ಯಾಧ್ಯಕ್ಷರ ಹುದ್ದೆ ದಲಿತರಿಗೆ ಸಿಗಬೇಕು ಎನ್ನುವ ಮನದಾಸೆ ವ್ಯಕ್ತಪಡಿಸಿದ್ದಾರೆ.




