ಸುರತ್ಕಲ್: ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದರ ಪರಿಣಾಮವಾಗಿ ಬಸ್ ಮುಂಭಾಗದಲ್ಲಿ ಕುಳಿತ ಮಹಿಳೆಯೊಬ್ಬರು ಕೆಳಗೆ ಬಿದ್ದು ತಲೆ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಜೋಕಟ್ಟೆ ಕ್ರಾಸ್ ಬಳಿಯ ಸರ್ವೀಸ್ ಸ್ಟೇಷನ್ ಬಳಿ ಜ.15ರಂದು ಬೆಳಗ್ಗೆ ಸಂಭವಿಸಿದೆ.
ಮೃತಪಟ್ಟ ಮಹಿಳೆ ಈರಮ್ಮ(65) ಎಂದು ಗುರುತಿಸಲಾಗಿದ್ದು, ಇವರು ತನ್ನ ಮಗಳೊಂದಿಗೆ ಖಾಸಗಿ ಬಸ್ಸಿನಲ್ಲಿ ಸುರತ್ಕಲ್ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಬಸ್ಸು ಜೋಕಟ್ಟೆ ಕ್ರಾಸ್ ಬಳಿಯ ಸರ್ವೀಸ್ ಸ್ಟೇಷನ್ ತಲುಪಿದಾಗ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾನೆ.
ಮುಂದಿನ ಸೀಟಿನಲ್ಲಿ ಕುಳಿತಿದ್ದ ಈರಮ್ಮ ಬಸ್‌ನಿಂದ ಕೆಳಗೆ ಬಿದ್ದಿದ್ದಾರೆ. ಅಲ್ಲದೇ ಬಸ್ಸಿನ ಹಿಂದಿನ ಎಡ ಚಕ್ರ ಈರಮ್ಮನ ಮೇಲೆ ಚಲಿಸಿದೆ. ಇದರ ಪರಿಣಾಮವಾಗಿ ತಲೆಗೆ ಬಲವಾದ ಪೆಟ್ಟಾಗಿದ್ದು ಈರಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉತ್ತರ ಸಂಚಾರಿ ಪೊಲೀಸ್ ರಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.