
ಬೇಲೂರು: ತಾಲೂಕಿನ ಬಿಕ್ಕೋಡು ಹೋಬಳಿ ಅಂಕಿಹಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ಕಾಡಾನೆ ತುಳಿತಕ್ಕೆ ಚಂದ್ರಮ್ಮ ಸಾವನ್ನಪ್ಪಿದ್ದಾರೆ. ಎಂದಿನಂತೆ ಬೆಳಗ್ಗೆ ಕಾಫಿ ತೋಟದ ಕೆಲಸಕ್ಕೆ ತೆರಳಿದ ವೇಳೆ ಏಕಾಏಕಿ ಕಾಡಾನೆಯಂದು ದಾಳಿ ಮಾಡಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದರು.





