ಉಡುಪಿ: ಪ್ರವಾಸಕ್ಕೆ ಬಂದಿದ್ದ ಬ್ಯಾಂಕ್ ಉದ್ಯೋಗಿಯೊಬ್ಬರು ಸಮುದ್ರದ ನೀರಿನಲ್ಲಿ ಕೊಚ್ಚಿಹೋದ ಘಟನೆ ಕೋಡಿಬೆಂಗ್ರೆಯ ಡೆಲ್ಟಾ ಬೀಚ್ ಎಂಬಲ್ಲಿ ಜ.27ರಂದು ಸಂಜೆ ನಡೆದಿದೆ.
ನಾಪತ್ತೆಯಾದವರನ್ನು ಬೆಂಗಳೂರಿನ ಬ್ಯಾಂಕ್ ಉದ್ಯೋಗಿ ನಿತೀನ್ (35) ಎಂದು ಗುರುತಿಸಲಾಗಿದೆ. ಇವರು ರಜೆಯ ಹಿನ್ನೆಲೆಯಲ್ಲಿ ಜ.26ರಂದು ಇಬ್ಬರು ಸ್ನೇಹಿತರೊಂದಿಗೆ ಉಡುಪಿಗೆ ಬಂದಿದ್ದು, ವಾಪಸ್ ತೆರಳುವ ಸಂದರ್ಭದಲ್ಲಿ ಡೆಲ್ಟಾ ಬೀಚ್‌ಗೆ ತೆರಳಿದ್ದಾರೆ ಎನ್ನಲಾಗಿದೆ.
ಅಲ್ಲಿ ಸಮುದ್ರದ ನೀರಿನಲ್ಲಿ ಆಡುತ್ತಿರುವಾಗ ನಿತೀನ್ ಅಲೆಗಳೊಂದಿಗೆ ಕೊಚ್ಚಿ ಕೊಂಡು ಹೋಗಿ ನಾಪತ್ತೆಯಾಗಿದ್ದಾರೆ. ಹುಡುಕಾಟ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.