ಸುಬ್ರಹ್ಮಣ್ಯ: ದೇವರ ದರ್ಶನ ಪಡೆದು ಆರತಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಕಳ್ಳರು ಮಹಿಳೆಯೊಬ್ಬರ 1.4 ಲಕ್ಷ ಮೌಲ್ಯದ ಚಿನ್ನದ ಕರಿಮಣಿಯನ್ನು ಎಗರಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದಿದೆ.
ಕಡಬ ತಾಲೂಕಿನ ಇಚ್ಲಂಪಾಡಿ ಬರೆಮೇಲು ನಿವಾಸಿ ಭಾರತಿ ಎಮ್.ಡಿ ಎಂಬುವವರು ಅಕ್ಟೋಬರ್ 22ರ ಮಧ್ಯಾಹ್ನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ದೇವರ ದರ್ಶನ ಪಡೆದು ಆರತಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಅವರ ಕುತ್ತಿಗೆಯಲ್ಲಿದ್ದ 4 ಪವನ್ ತೂಕದ ಕರಿಮಣಿ ಸರವು ಕಾಣೆಯಾಗಿತ್ತು. ಬಳಿಕ ಕರಿಮಣಿ ಸರಕ್ಕಾಗಿ ದೇವಸ್ಥಾನದ ಆವರಣದಲ್ಲಿ ಹುಟುಕಾಟ ನಡೆಸಿದರೂ ಪತ್ತೆಯಾಗದ ಹಿನ್ನಲೆಯಲ್ಲಿ ಪೊಲೀಸರಿಗೆ ದೂರನ್ನು ನೀಡಿದ್ದಾರೆ.