ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದೆ. ಸೋಮವಾರದಿಂದ ಶನಿವಾರದೊಳಗೆ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಅಥವಾ ಸಚಿವ ಸಂಪುಟದ ವಿಸ್ತರಣೆ ವಿಚಾರಗಳ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ಹೈಕಮಾಂಡ್ ಇದನ್ನು ನಿರ್ಧರಿಸುತ್ತದೆ. ಅದು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮನಸ್ಸಿನಲ್ಲಿ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಬೇಕು ಎಂಬ ವಿಚಾರವಿದೆ. ಆಡಳಿತಾತ್ಮಕ ಅನುಕೂಲತೆ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯ ವಿಭಜನೆ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಚರ್ಚೆ ನಡೆಸಿ 2 ಅಥವಾ 3 ಜಿಲ್ಲೆ ರಚನೆಗೆ ಯೋಜಿಸಿದ್ದರು. ಆದರೆ, ಬೇರೆ ಬೇರೆ ತಾಲೂಕುಗಳನ್ನು ಜಿಲ್ಲೆಯಾಗಿ ಘೋಷಿಸಬೇಕು ಎಂದು ಹಲವರು ನಿಯೋಗ ತಂದರು. ಹಾಗಾಗಿ ಅಳೆದು ತೂಗಿ ನಿರ್ಧಾರ ಮಾಡಲು ಆಗಲಿಲ್ಲ ಎಂದು ಹೇಳಿದರು.




