ಮಂಗಳೂರು: ನ.19ರಂದು ಗುಜರಾತ್ ನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ನಡೆಯುವ ವಿಶ್ವಕಪ್ ಫೈನಲ್ ಪಂದ್ಯಾವಳಿಯನ್ನು ಸಾರ್ವಜನಿಕರು ನೇರ ಪ್ರಸಾರದಲ್ಲಿ ವೀಕ್ಷಿಸಲು ಮಂಗಳೂರು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಬೃಹತ್ ಎಲ್.ಇ.ಡಿ ಪರದೆ ವ್ಯವಸ್ಥೆಯನ್ನು ಮಾಡಲಾಗಿದೆ. ಇಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಪಂದ್ಯ ವೀಕ್ಷಣೆಗೆ ಪ್ರವೇಶಾವಕಾಶ ಉಚಿತವಾಗಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಇಂದು ಅಪರಾಹ್ನ 2 ಗಂಟೆಗೆ ನಡೆಯುವ ಫೈನಲ್ ಪಂದ್ಯವನ್ನು ವೀಕ್ಷಿಸಲು ಕ್ರೀಡಾ ಪ್ರೇಮಿಗಳಿಗೆ ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ. ಜಿಲ್ಲೆ ಇದರ ವತಿಯಿಂದ ಮಂಗಳಾ ಕ್ರೀಡಾಂಗಣದಲ್ಲಿ 8×12 ಎಲ್.ಇ.ಡಿ. ಡಿಸ್ ಪ್ಲೇ ವ್ಯವಸ್ಥೆ ಕಲ್ಪಿಸಲಾಗಿದೆ.
ಉತ್ತಮ ಎಲ್.ಇ.ಡಿ. ಸ್ಕ್ರೀನ್ ಮತ್ತು ಸೌಂಡ್ ಸಿಸ್ಟಮ್ ನೊಂದಿಗೆ ಫೈನಲ್ ಪಂದ್ಯದ ನೇರ ಪ್ರಸಾರವನ್ನು ದೊಡ್ಡ ಪರದೆಯಲ್ಲಿ ಸಾರ್ವಜನಿಕರು ಇಲ್ಲಿ ವೀಕ್ಷಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲಾ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.