ದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಕ್ರಿಕೆಟ್ ತಂಡ ವಿಶ್ವಕಪ್-2023ರ ತನ್ನ 2ನೇ ಪಂದ್ಯವನ್ನು ಅ.11 ರಂದು ಅಫ್ಘಾನಿಸ್ತಾನ ವಿರುದ್ಧ ಆಡಲಿದೆ. ಭಾನುವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು 6 ವಿಕೆಟ್ಗಳಿಂದ ಸೋಲಿಸಿದ ಭಾರತ ಕ್ರಿಕೆಟ್ ತಂಡ ವಿಶ್ವಕಪ್-2023ರ ಟೂರ್ನಿಯಲ್ಲಿ ಗೆಲುವಿನೊಂದಿಗೆ ಪಯಣ ಆರಂಭಿಸಿದೆ.
ಈ ಗೆಲುವಿನ ನಂತರ ಈಗಾ ಎರಡನೇ ಗೆಲುವಿನತ್ತ ದೃಷ್ಟಿ ನೆಟ್ಟಿದೆ. ಇಂದು ನಡೆಯಲಿರುವ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಅಫ್ಘಾನಿಸ್ತಾನ ಬೌಲರ್ ನವೀನ್ ಉಲ್ ಹಕ್ ಮುಖಾಮುಖಿಯಾಗಲಿದ್ದಾರೆ.