ಧರ್ಮಶಾಲಾ: ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಭಾನುವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತವು 4 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಸತತ 5ನೇ ಗೆಲುವು ದಾಖಲಿಸಿದ ಭಾರತ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿದೆ.
ಟಾಸ್ ಗೆದ್ದ ಭಾರತವು ನ್ಯೂಜಿಲೆಂಡ್ ತಂಡವನ್ನು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಿದ್ದು, ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 50 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 273 ರನ್ ಕಲೆ ಹಾಕಿತ್ತು. ಗೆಲುವಿನ ಗುರಿ ಬೆನ್ನತ್ತಿದ ಭಾರತ 48 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 274 ರನ್ ಕಲೆ ಹಾಕಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ದು ಭಾರತದ ಗೆಲುವಿಗೆ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. ಭಾರತದ ಪರ ಮುಹಮ್ಮದ್ ಶಮಿ ಅವರು ಐದು ವಿಕೆಟ್ ಗಳನ್ನು ಪಡೆದು ದಾಖಲೆಯನ್ನು ಬರೆದರು.
ಭಾರತ 20 ವರ್ಷಗಳ ನಂತರ ಐಸಿಸಿ ಟೂರ್ನಮೆಂಟ್ನಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಮೊದಲ ಗೆಲುವು ದಾಖಲಿಸಿದೆ.