ದಾಖಲೆ ವಿಶ್ವ ದಾಖಲೆ… ತನ್ನದೇ ವರ್ಲ್ಡ್ ರೆಕಾರ್ಡ್ ಮುರಿದ ಸ್ಮೃತಿ ಮಂಧಾನ

Share with

ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ತನ್ನದೇ ಹೆಸರಿನಲ್ಲಿದ್ದ ವರ್ಲ್ಡ್ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದೇ ವಿಶೇಷ.

ಅಂದರೆ ವುಮೆನ್ಸ್ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ ಒಂದೇ ವರ್ಷ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಸ್ಮೃತಿ ಮಂಧಾನ ಮರು ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ 2024 ರಲ್ಲಿ ಸ್ಮೃತಿ ಟಾಪ್ ಸ್ಕೋರರ್ ಆಗಿ ಹೊಹೊಮ್ಮಿದ್ದರು. ಇದೀಗ ಕಳೆದ ವರ್ಷದ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

2024 ರಲ್ಲಿ ಟೆಸ್ಟ್, ಟಿ20 ಮತ್ತು ಏಕದಿನ ಕ್ರಿಕೆಟ್ನಲ್ಲಿ ಒಟ್ಟು 35 ಇನಿಂಗ್ಸ್ ಆಡಿದ್ದ ಸ್ಮೃತಿ ಮಂಧಾನ ಒಟ್ಟು 1659 ರನ್ ಕಲೆಹಾಕಿದ್ದರು. ಈ ಮೂಲಕ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಂದೇ ವರ್ಷ 1600+ ರನ್ ಕಲೆಹಾಕಿದ ವಿಶ್ವದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದರು.

ಇದೀಗ ತನ್ನದೇ ವಿಶ್ವ ದಾಖಲೆಯನ್ನು ಮುರಿದು ಸ್ಮೃತಿ ಮಂಧಾನ ಹೊಸ ಇತಿಹಾಸ ಬರೆದಿದ್ದಾರೆ. ಈ ವರ್ಷ ಈವರೆಗೆ 32 ಅಂತಾರಾಷ್ಟ್ರೀಯ ಇನಿಂಗ್ಸ್ ಆಡಿರುವ ಟೀಮ್ ಇಂಡಿಯಾ ಉಪನಾಯಕಿ ಒಟ್ಟು 1703 ರನ್ ಕಲೆಹಾಕಿದ್ದಾರೆ. ಈ ಮೂಲಕ ವುಮೆನ್ಸ್ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ ಒಂದೇ ವರ್ಷದೊಳಗೆ 1700+ ರನ್ ಕಲೆಹಾಕಿದ ವಿಶ್ವದ ಮೊದಲ ಮಹಿಳಾ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಈ ವರ್ಷ ಕಲೆಹಾಕಿರುವ 1703 ರನ್ಗಳೊಂದಿಗೆ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 10000 ರನ್ ಪೂರೈಸಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಅತೀ ಕಡಿಮೆ ಇನಿಂಗ್ಸ್ಗಳ (281) ಮೂಲಕ 10 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

Leave a Reply

Your email address will not be published. Required fields are marked *