ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ ಕೂಗು ಹಲವು ಸಮಯದಿಂದ ಕೇಳಿಬರುತ್ತಿದೆ. ಇದೀಗ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಲೆಂದು ವಿಶೇಷ ಪೂಜೆ ಸಲ್ಲಿಸಲಾಗಿದೆ.

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗಿದ್ದು, ಡಿಕೆ ಶಿವಕುಮಾರ್ ಫೋಟೊ ಹಿಡಿದುಕೊಂಡು 20ಕ್ಕೂ ಹೆಚ್ಚು ಶಬರಿಮಲ ಯಾತ್ರಿಗಳು “ಡಿಕೆ ಶಿವಕುಮಾರ್ ಸಿಎಂ ಆಗಲಿ” ಎಂದು ಘೋಷಣೆ ಕೂಗಿದ್ದಾರೆ.




