ಸ್ವಾತಂತ್ರ್ಯ ದಿನಾಚರಣೆ, ಚೌತಿ ಹಬ್ಬದ ಪ್ರಯುಕ್ತ ಯಶವಂತಪುರ-ಮಡಗಾಂವ್‌ ವಿಶೇಷ ಎಕ್ಸ್ ಪ್ರಸ್ ರೈಲು

Share with

ಮಂಗಳೂರು:ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿಯ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ಜನದಟ್ಟಣೆ ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ-ಮಡಗಾಂವ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್‌ ರೈಲು ಓಡಿಸಲಿದೆ.

ರೈಲು ಸಂಖ್ಯೆ 06541 ಯಶವಂತಪುರ-ಮಡಗಾಂವ್‌ ವಿಶೇಷ ಎಕ್ಸ್ ಪ್ರಸ್ ರೈಲು, ಆ.14ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಆ.15ರಂದು ಸಂಜೆ 6.05ಕ್ಕೆ ಮಡಗಾಂವ್ ತಲುಪಲಿದೆ. ಮತ್ತೆ ಮರಳಿ, ರೈಲು ಸಂಖ್ಯೆ 06542 ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್ ಪ್ರಸ್ ರೈಲು ಆ.17ರಂದು ರಾತ್ರಿ 10.15ಕ್ಕೆ ಮಡಗಾಂವ್‌ನಿಂದ ಹೊರಟು, ಆ.18ರಂದು ಸಂಜೆ 4.30 ಗಂಟೆಗೆ ಯಶವಂತಪುರಕ್ಕೆ ತಲುಪಲಿದೆ.

ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ-ಪುತ್ತೂರು, ಬಂಟ್ವಾಳ, ಸುರತ್ಕಲ್, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲ್ಲಲಿವೆ. ರೈಲಿಗೆ ಮಂಗಳೂರು ಸೆಂಟ್ರಲ್, ಜಂಕ್ಷನ್‌ಗಳಲ್ಲಿ ನಿಲುಗಡೆ ಇರುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.


Share with

Leave a Reply

Your email address will not be published. Required fields are marked *