ವಿಟ್ಲ: ಯುವಕ ನೇಣು ಬಿಗಿದು ಆತ್ಮಹತ್ಯೆ!

Share with

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ ಎಂದು ಗುರುತಿಸಲಾಗಿದೆ.

ವಿಟ್ಲ: ವಿಟ್ಲ ಸಮೀಪದ ಪುಣಚದಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26) ಎಂದು ಗುರುತಿಸಲಾಗಿದ್ದು, ಈತ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ.

ಮೃತರು ತಾಯಿ, ಸಹೋದರ, ಸಹೋದರಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ ಎಂದು ತಿಳಿದು ಬಂದಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Share with

Leave a Reply

Your email address will not be published. Required fields are marked *