ದೇಶದಲ್ಲಿ ಪ್ರತಿ ವರ್ಷ 5 ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಸುಮಾರು 150,000 ಜನರು ಸಾವನ್ನಪ್ಪುತ್ತಿದ್ದಾರೆ ಎಂದು ಲೋಕಸಭೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಸಾವು-ನೋವುಗಳಲ್ಲಿ ಹೆಚ್ಚಿನವರು ಯುವಕರು.

ಈ ಅಪಘಾತಗಳಲ್ಲಿ ಗಾಯಗೊಂಡವರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡಿದರೆ, 50,000 ಜೀವಗಳನ್ನು ಉಳಿಸಬಹುದು. ರಸ್ತೆ ಅಪಘಾತಗಳನ್ನು ತಡೆಗಟ್ಟಲು ಜಾಗೃತಿ ಅಭಿಯಾನವನ್ನು ಪ್ರಾರಂಭಿಸುವಂತೆ ಸಂಸದರಿಗೆ, ಸಚಿವರು ಕರೆ ನೀಡಿದ್ದಾರೆ.




