ಕಾಡಾನೆ ದಾಳಿಗೆ ಯುವತಿ ಸಾವು!

Share with

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬನ್ನೂರು ಬಳಿ ಕಾಡಾನೆ ದಾಳಿಯಿಂದ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

25 ವರ್ಷದ ಅನಿತಾ ಮೃತ ಯುವತಿ. ಅವರು ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಕೆಲಸ ಮುಗಿಸಿ ರಾತ್ರಿ 9 ಗಂಟೆಗೆ ಮನೆಗೆ ವಾಪಸ್ ಬರುತ್ತಿದ್ದಾಗ, ಆನೆ ದಾಳಿ ಮಾಡಿದೆ.

ತೀವ್ರವಾಗಿ ಗಾಯಗೊಂಡಿದ್ದ ಯುವತಿಯನ್ನು ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.


Share with