ಅಸಭ್ಯವಾಗಿ ಕಾಣುವಂತೆ ಯುವತಿಯರ ಫೋಟೋ, ವಿಡಿಯೋಗಳನ್ನು ರೆಕಾರ್ಡ್ ಮಾಡಿ ಪೋಸ್ಟ್ ಮಾಡುತ್ತಿದ್ದ ಯುವಕನನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಗುರುದೀಪ್ ಸಿಂಗ್ (26) ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಯುವತಿಯರ ಅಸಭ್ಯ ಫೋಟೋ, ವಿಡಿಯೋಗಳನ್ನು ರೆಕಾರ್ಡ್ ಮಾಡಿ ಇನ್ಸಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುತ್ತಿದ್ದ. ಈ ಬಗ್ಗೆ ಯುವತಿಯೊಬ್ಬಳು ಪೊಲೀಸರನ್ನು ಟ್ಯಾಗ್ ಮಾಡಿ ದೂರು ನೀಡಿದ್ದಳು. ಈ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.