ಬೆಂಗಳೂರು: ಟಿ ನರಸೀಪುರ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಖಂಡನೀಯ ಮತ್ತು ತಪ್ಪಿತಸ್ಥರಿಗೆ ಕಠಿನ ಶಿಕ್ಷೆಯಾಗಬೇಕು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದರು.
ಸಾಮಾಜಿಕ ಸಬಲೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರೆದ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿರುವ ಸಮಾಜ ಕಲ್ಯಾಣ ಖಾತೆ ಸಚಿವರು, ವೇಣುಗೋಪಾಲ ಕೊಲೆ ಪ್ರಕರಣದಲ್ಲಿ ಸರ್ಕಾರ ಈಗಾಗಲೇ ತನಿಖೆಗೆ ಆದೇಶಿಸಿದ್ದು, ಇದರಲ್ಲಿ ರಾಜಕೀಯ ಹಾಗೂ ಧರ್ಮದ ಜೊತೆ ಯಾವುದೇ ರೀತಿಯ ಸಂಬಂಧ ಹೊಂದಿಲ್ಲ ಎಂದು ಹೇಳಿದರು. ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾಡಿರುವ ಆರೋಪಗಳು ನಿಜವಲ್ಲ ಮತ್ತು ಪುರಾವೆಗಳೇ ಇಲ್ಲದ ಆರೋಪ ಎಂದು ಸಚಿವರು ಹೇಳಿದರು.