ಉಳ್ಳಾಲ: ನೇಣು ಬಿಗಿದು ಯುವಕ ಆತ್ಮಹತ್ಯೆ

Share with

ಉಳ್ಳಾಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡಿಪುನಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್.

ಕಂಕನಾಡಿಯ ಕಾಂಚನ ಶೋರೂಮಿನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಜಯ ಎಂಬವರಿಗೆ ಸೇರಿದ ಮುಡಿಪುವಿನ ಕಾರಿನ ಗ್ಯಾರೇಜ್ ಒಳಗಡೆ ಕಬ್ಬಿಣದ ರಾಡಿಗೆ ನೇಣು ಹಾಕಿಕೊಂಡು ಕೃತ್ಯವೆಸಗಿದ್ದಾರೆ ಎಂದು ತಿಳಿದು ಬಂದಿದೆ. ನ.20ರಂದು ಕೆಲಸಕ್ಕೆ ಹೋದವರು ತಡರಾತ್ರಿಯಾದರೂ ಮನೆಗೆ ವಾಪಸ್ಸಾಗದೇ ಇರುವುದನ್ನು ಗಮನಿಸಿ ಮನೆಯ ಸುತ್ತ-ಮುತ್ತ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿ ಬಳಿಕ ನಿತ್ಯ ಕಿಶೋರ್ ಕೆಲಸದಿಂದ ವಾಪಸ್ಸಾಗಿ ಕುಳಿತುಕೊಳ್ಳುವ ಗ್ಯಾರೇಜ್ ಸಮೀಪ ಹುಡುಕಾಡಿದಾಗ ಬೈಕ್ ಪತ್ತೆಯಾಗಿದ್ದು, ಒಳಗೆ ಗಮನಿಸಿದಾಗ ನೇಣು ಹಾಕಿರುವುದು ಗಮನಕ್ಕೆ ಬಂದಿದೆ.

ಕಿಶೋರ್ ಕೆಲಸ ಮಾಡುತ್ತಿದ್ದ ಶೋ ರೂಮಿನ ಸೂಪರ್ ವೈಸರ್ ಆರು ತಿಂಗಳ ಹಿಂದಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಆಪ್ತಸ್ನೇಹಿತರಾಗಿದ್ದ ಕಿಶೋರ್ ಇದೇ ಘಟನೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.


Share with

Leave a Reply

Your email address will not be published. Required fields are marked *