ಉಡುಪಿ: ಉಡುಪಿಯ ಕಾಪು ತಾಲೂಕಿನ ಕುರ್ಕಾಲು ಗ್ರಾಮದಲ್ಲಿ ಅಡಿಕೆ ತೆಗೆಯುವ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ ಎಂದು ವರದಿಯಾಗಿದೆ.


ಮಹಾರಾಷ್ಟ್ರ ಮೂಲದ ಪವನ್ ಶ್ರವಣ್ ಸೇವಂತ್(20) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಈತ ಕಬ್ಬಿಣದ ರಾಡ್ ಗೆ ಕತ್ತಿ ಕಟ್ಟಿ ಅಡಿಕೆ ತೆಗೆಯಲು ಮುಂದಾಗಿದ್ದ ವೇಳೆ ವಿದ್ಯುತ್ ತಂತಿಗೆ ರಾಡ್ ತಗುಲಿದ ಪರಿಣಾಮವಾಗಿ ಕರೆಂಟ್ ಶಾಕ್ ಹೊಡೆದು ಯುವಕ ಮೃಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಶಿರ್ವ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




