ಬೆಂಗಳೂರು: ರಾಜ್ಯ ಬಜೆಟ್ 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಚಿತ್ರರಂಗಕ್ಕೆ ಸಿಹಿಸುದ್ದಿ ನೀಡಿದ್ದಾರೆ. ಹಲವು ವರ್ಷಗಳಿಂದ ಫಿಲ್ಮ್ ಸಿಟಿ ನಿರ್ಮಾಣದ ಬಗ್ಗೆ ಚರ್ಚೆ ನಡೆಯುತ್ತಲೇ ಇದ್ದು, ಈ ಹಿಂದಿನ ಸರ್ಕಾರಗಳ ಆಡಳಿತ ಅವಧಿಯಲ್ಲೂ ಬಜೆಟ್ ಮಂಡನೆ ವೇಳೆ ಈ ವಿಷಯ ಪ್ರಸ್ತಾಪವಾಗಿತ್ತು.
ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡುವುದಾಗಿ ಈ ಬಾರಿ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಹಿಂದೆ ಕೂಡ ಸಿಎಂ ಸಿದ್ದು ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡುವುದಾಗಿ ಹೇಳಿದ್ದರು. ನಂತರ ಎಚ್ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ರಾಮನಗರದಲ್ಲಿ ಫಿಲ್ಮ್ ಸಿಟಿ ನಿರ್ಮಿಸುವ ಉದ್ದೇಶದ ಹೊಂದಿದ್ದರು. ಬಿಜೆಪಿ ಸರ್ಕಾರ ಮೈಸೂರು, ರಾಮನಗರ ಬಿಟ್ಟು ಬೆಂಗಳೂರಿನ ಹೊರ ವಲಯದಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಒಲವು ತೋರಿತ್ತು. ಈ ಬಗ್ಗೆ ಹಿಂದಿನ ಬಜೆಟ್ಗಳಲ್ಲಿ ಘೋಷಣೆ ಮಾಡಲಾಗಿತ್ತು
ಸದ್ಯ ಕರ್ನಾಟಕದಲ್ಲಿ ದೊಡ್ಡ ಫಿಲ್ಮ್ ಸಿಟಿ ಇಲ್ಲದೇ ಇದ್ದು ಕಂಠೀರವ ಸ್ಟುಡಿಯೋ, ಅಬ್ಬಯ್ಯ ನಾಯ್ಡು ಸ್ಟುಡಿಯೋ ಹಾಗೂ ಅಭಿಮಾನ್ ಸ್ಟುಡಿಯೋಗಳಲ್ಲಿ ಸಿನಿಮಾಗಳ ಚಿತ್ರೀಕರಣ ನಡೀತಿದೆ. ಆದರೆ ಸಕಲ ಸೌಕರ್ಯಗಳಿರುವ ಫಿಲ್ಮ್ ಸಿಟಿಗಾಗಿ ಹೈದರಾಬಾದ್ಗೆ ತೆರಳುವಂತಾಗಿದೆ.